ಲಕ್ಕಿ ಬಂಬು ಎಂದು ಕರೆಯಲ್ಪಡುವ ಭಾಗ್ಯ ಬಿದಿರು ಎಂಬ ಸಸ್ಯವು ಮನೆಗೆ ಭಾಗ್ಯವನ್ನು ತರುತ್ತದೆ ಎಂದು ಪೆಂಗ್ ಶುಯಿ ಹೇಳುತ್ತದೆ ಬಂಬೂ ಎಂದು ಕರೆಯಲ್ಪಟ್ಟರೂ ಇದು ಬಿದಿರಿನ ವರ್ಗಕ್ಕೆ ಸೇರಿದ ಸಸ್ಯವಲ್ಲ ನೀರಿನಲ್ಲಿರಿಸಿ ಬೆಳೆಸಬಹುದಾದ ಈ ಸಸ್ಯವು ಮನೆಗೆ ಐಶ್ವರ್ಯ ಮತ್ತು ಆರೋಗ್ಯವನ್ನು ಪ್ರದಾನ ಮಾಡುತ್ತದೆ ಮತ್ತು ಇದನ್ನು ಯೋಗ್ಯ ದಿಕ್ಕಿನಲ್ಲಿ ಇರಿಸುವುದರಿಂದ ಅಭಿವೃದ್ಧಿ ನಿಶ್ಚಿತ ಎಂದು ಫೆಂಗ್ ಶುಯಿ ಹೇಳುತ್ತದೆ.
ಉತ್ತಮ ಆರೋಗ್ಯಕ್ಕಾಗಿ ಇದನ್ನು ಪೂರ್ವ ದಿಕ್ಕಿನಲ್ಲಿಯೂ ದನಲಬ್ದಿಗಾಗಿ ಆಗ್ನೇಯ ದಿಕ್ಕಿನಲ್ಲಿಯೂ ಇರಿಸುವುದು ಸೂಕ್ತವಾಗಿದೆ ಸಸ್ಯದ ಕಾಂಡವನ್ನು ಕೆಂಪು ರಿಬ್ಬನ್ ನಿಂದ ಸುತ್ತಿದರೆ ಅದು ಚೈತನ್ಯವನ್ನು ಉತ್ಪಾದಿಸುತ್ತದೆ ಎಂದು ನಂಬಲಾಗುತ್ತದೆ ಕಾಂಡಗಳನ್ನು ಇರಿಸುವಾಗ ಅವುಗಳ ಸಂಖ್ಯೆಯಲ್ಲಿ ಜಾಗೃತರಾಗಿರಿ
1. ಮೂರು ಕಾಂಡಗಳನ್ನು ಒಟ್ಟಿಗೆ ಕಟ್ಟಿದರೆ ಸಂತೋಷ ಪ್ರಧಾನವಾಗುತ್ತದೆ 2. 5 ಕಾಂಡಗಳನ್ನು ಒತ್ತೊಟ್ಟಿಗೆ ಇರಿಸಿದರೆ ಧನಲಾಭವಾಗುತ್ತದೆ 03. 21 ಕಾಂಡಗಳನ್ನು ಒತ್ತೊಟ್ಟಿಗೆ ಇರಿಸುವುದರಿಂದ ಐಶ್ವರ್ಯ ಬಾಗಿಲಿಗೆ ಬಂದು ಸೇರುವವು 04. ನಾಲ್ಕು ಕಾಂಡಗಳನ್ನು ಒಟ್ಟಿಗೆ ಕಟ್ಟಿದರೆ ಮರಣ ಎಂಬ ಪ್ರತೀತಿ ಇದೆ ಅದು ಹೇಗೆಂದರೆ ಫೋರ್ ಎಂಬ ಪದಕ್ಕೆ ಸದೃಶವಾಗಿರುವ ಪದವು ಚೈನಾದಲ್ಲಿ ಮರಣವೆಂಬ ಅರ್ಥವನ್ನು ಹೊಂದಿದೆ ಆದುದರಿಂದ ನಾಲ್ಕು ಕಾಂಡಗಳನ್ನು ಒಟ್ಟಿಗೆ ಎಂದೂ ಬಳಸಬಾರದು ಬೆಳೆಸುವ ವಿಧಾನ ಇದನ್ನು ಇಡುವ ನೀರಿನಲ್ಲಿ ಕ್ಲೋರಿನ್ ಅಂಶ ಇಲ್ಲದಂತೆ ಜಾಗೃತಿ ವಹಿಸಬೇಕು ಮತ್ತು ಅಲ್ಪ ಸೂರ್ಯಪ್ರಕಾಶ ತಾಗುತ್ತಿರಬೇಕು
ಅತಿ ಉಷ್ಣಾಂಶವಿದ್ದರೆ ಅವುಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ ಆದುದರಿಂದ ಕೋಣೆಯ ಉಷ್ಣತೆ ಮಿತವಾಗಿರಲಿ ಎಳೆ ಕಾಂಡದ ಕತ್ತರಿಸಿದ ಭಾಗಗಳನ್ನು ನೀರಿನಲ್ಲಿ ಇರಿಸಿದರೆ ಅವುಗಳು ಕ್ರಮೇಣ ಬೆಳೆಯಲಾರಂಭಿಸುತ್ತವೆ ಬುಡದಲ್ಲಿ ನೀರು ಅಧಿಕವಾಗಿ ತಂಗಿನಿಲ್ಲದಂತೆ ಜಾಗ್ರತೆ ವಹಿಸಿದರೆ ಇವುಗಳು ದಟ್ಟವಾಗಿ ಬೆಳೆಯುವುವು ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು