CWG 2022 : ಆಂಗ್ಲರ ವಿರುದ್ಧ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಭರ್ಜರಿ ಗೆಲುವು!

Commonwealth Games 2022 : ಯುನೈಟೆಡ್ ಕಿಂಗ್‌ಡಂನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022 ರ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು  ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವನ್ನು ಸೋಲಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿದೆ. ಕಾಮನ್‌ವೆಲ್ತ್‌ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತದ ಮಹಿಳಾ ಕ್ರಿಕೆಟ್‌ ತಂಡ ಇಂಗ್ಲೆಂಡ್‌ ತಂಡವನ್ನು ಕಾದಾಟದಲ್ಲಿ ಮಣಿಸಿ ಮೊದಲ ಪದಕವನ್ನು ತನ್ನದಾಗಿಸಿಕೊಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ 4 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು.

ಭಾರತಕ್ಕೆ ರೋಚಕ ಗೆಲುವು

ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಟೀಂ ಇಂಡಿಯಾ ಪರ ಟಿ ಮಂಧಾನ 32 ಎಸೆತಗಳಲ್ಲಿ 61 ರನ್ ಹಾಗೂ ಜೆಮಿಮಾ ರೋಡ್ರಿಗಸ್ 31 ಎಸೆತಗಳಲ್ಲಿ 44 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಸ್ನೇಹ್ ರಾಣಾ 2 ವಿಕೆಟ್ ಪಡೆದರು.

CWG 2022 ರಲ್ಲಿ ಟೀಂ ಇಂಡಿಯಾ

ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ, ಭಾರತ ತಂಡವು ಜುಲೈ 29 ರಂದು ತನ್ನ ಪ್ರಯಾಣ ಆರಂಭಿಸಿತು. ಟೀಂ ಇಂಡಿಯಾದ ಮೊದಲ ಪಂದ್ಯವು 29 ಜುಲೈ 2022 ರಂದು ಆಸ್ಟ್ರೇಲಿಯಾ ವಿರುದ್ಧ ನಡೆಯಿತು, ಇದರಲ್ಲಿ ತಂಡವು 3 ವಿಕೆಟ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು. ಎರಡನೇ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿತು. ಭಾರತ ತಂಡ ಬಾರ್ಬಡೋಸ್ ವಿರುದ್ಧ ಮೂರನೇ ಪಂದ್ಯವನ್ನು ಗೆದ್ದು ಈಗ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿದೆ.

ಎರಡೂ ತಂಡಗಳ ಪೇಯಿಂಗ್ 11 ಹೀಗಿದೆ

ಭಾರತ ಪ್ಲೇಯಿಂಗ್ XI: ಶೆಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ತಾನಿಯಾ ಭಾಟಿಯಾ (ವಿಕೆಟ್‌ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ಸ್ನೇಹ ರಾಣಾ, ಮೇಘನಾ ಸಿಂಗ್, ರೇಣುಕಾ ಸಿಂಗ್.

ಇಂಗ್ಲೆಂಡ್ ಪ್ಲೇಯಿಂಗ್ XI: ಡೇನಿಯಲ್ ವ್ಯಾಟ್, ಸೋಫಿಯಾ ಡಂಕ್ಲಿ, ಎಲ್ಲಿಸ್ ಕೆಪ್ಸೆ, ನಟಾಲಿ ಸ್ಕಿವರ್ (ಸಿ), ಆಮಿ ಜೋನ್ಸ್ (ವಾಕ್), ಮಾಯಾ ಬೌಚರ್, ಕ್ಯಾಥರೀನ್ ಬ್ರಂಟ್, ಸೋಫಿ ಎಕ್ಲೆಸ್ಟನ್, ಫ್ರೇಯಾ ಕೆಂಪ್, ಇಜ್ಜಿ ವಾಂಗ್, ಸಾರಾ ಗ್ಲೆನ್.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.



Source link

Leave a Comment