ನವೆಂಬರ್ 1 ರಂದು ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ

ಬೆಂಗಳೂರು: ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಇನ್ಮುಂದೆ ನೀವು ಡ್ರೈವಿಂಗ್ ಲೈಸನ್ಸ್ ಗಾಗಿ ಆರ್‌ಟಿಒ ಬಳಿ ಡ್ರೈವಿಂಗ್ ಟೆಸ್ಟ್ ಮಾಡುವಂತಿಲ್ಲ…!

ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು.ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ  ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. 

ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ

ಇದನ್ನೂ ಓದಿ: ಗಾಳಿಪಟ-2 ಬಾನಂಗಳದಲ್ಲಿ ಹಾರಿಸಲು ಡೇಟ್‌ ಫಿಕ್ಸ್‌: ಗಣಿ-ಭಟ್ರ ಕಾಂಬಿನೇಷನ್‌ ಮತ್ತೆ ತೆರೆಮೇಲೆ

1922 ರಿಂದ ಫಲಪುಷ್ಪ ಪ್ರದರ್ಶನ ನಿರಂತರವಾಗಿ ನಡೆಯುತ್ತಿದೆ.ಪ್ರತಿ ವರ್ಷ ಅತಿ ಹೆಚ್ವು ಜನರನ್ನು ಆಕರ್ಷಿಸುತ್ತಿದೆ. ಈ ಬಾರಿ ಸ್ವಾತಂತ್ರ್ಯೋತ್ಸವದ  ಅಮೃತ ವರ್ಷಾಚರಣೆಯ ಅಂಗವಾಗಿ ಸಂಭ್ರಮ ತುಂಬಿದೆ. ಫಲಪುಷ್ಪ ಪ್ರದರ್ಶನಕ್ಕೆ ವಿಶೇಷ ಕಳೆ ಬಂದಿದೆ. ಮುಂದಿನ 10 ದಿನಗಳ ಕಾಲ ಪ್ರತಿ ದಿನ ಲಕ್ಷಾಂತರ ಜನ ಬರುವ ನಿರೀಕ್ಷೆ ಇದೆ.ಈ ಬಾರಿ ಡಾ: ರಾಜ್ ಕುಮಾರ್ ಹಾಗೂ ಪುನೀತ್  ರಾಜ್ ಕುಮಾರ್ ಅವರ ಸ್ಮರಣಾರ್ಥ ವಿಶೇಷವಾದ ಪ್ರದರ್ಶನ ಏರ್ಪಟ್ಟಿದೆ. ಹಾಗಾಗಿ ಇನ್ನಷ್ಟು ಜನರನ್ನು ಪ್ರದರ್ಶನ ಆಕರ್ಷಿಸುವ ನಿರೀಕ್ಷೆ ಇದೆ. ತೋಟಗಾರಿಕಾ ಇಲಾಖೆ ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ಅಧಿಕಾರಿಗಳು ಉತ್ತಮವಾಗಿ ವ್ಯವಸ್ಥೆ ಮಾಡಿದ್ದಾರೆ.ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಿ ಆನಂದಿಸಬೇಕೆಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 



Source link

Leave a Comment