ಖಾಲಿ ಹೊಟ್ಟೆಯಲ್ಲಿ ದಿನಕ್ಕೊಂದು ಬೆಳ್ಳುಳ್ಳಿ ಎಸಳನ್ನು ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹೆಚ್ಚಿನ ರೋಗನಿರೋಧಕ ಶಕ್ತಿ ಇದೆ. ಇದು ದೇಹದಲ್ಲಿ ಕಾಡುವ ಅನೇಕ ಕಾಯಿಲೆಗಳನ್ನು ಮತ್ತು ಗುಪ್ತ ಸಮಸ್ಯೆಗಳನ್ನು ದೂರ ಮಾಡುತ್ತದೆ. ಪ್ರಕೃತಿದತ್ತವಾದ ಬೆಳ್ಳುಳ್ಳಿಯಿಂದ ಯಾವುದೇ ಅಡ್ಡಪರಿಣಾಮವಿಲ್ಲ. ಬೆಳ್ಳುಳ್ಳಿಯು ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯಕ್ಕೂ ಕೂಡ ಲಾಭದಾಯಕವಾಗಿದೆ.
ಪ್ರತಿದಿನ ಬೆಳಗ್ಗೆ ಒಂದು ಬೆಳ್ಳುಳ್ಳಿ ಎಸಳನ್ನು ಸೇವನೆ ಮಾಡುವುದರಿಂದ ಇದು ಆಂಟಿಬಯೋಟಿಕ್ ಆಗಿ ಕೆಲಸ ಮಾಡುತ್ತದೆ. ಬೆಳ್ಳುಳ್ಳಿಯು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಹೊಟ್ಟೆಯನ್ನು ಬ್ಯಾಕ್ಟೇರಿಯಾದಿಂದ ಮುಕ್ತಿಗೊಳಿಸುತ್ತದೆ. ಬೆಳಗ್ಗೆ ಬೆಳ್ಳುಳ್ಳಿ ಸೇವಿಸಿದರೆ ಹಸಿವು ಹೆಚ್ಚಾಗುತ್ತದೆ ಮತ್ತು ಕರುಳು ಸಕ್ರಿಯವಾಗಿ ಕೆಲಸ ಮಾಡುತ್ತದೆ. ಶ್ವಾಸಕೋಶ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಇದು ರಾಮಬಾಣ. ಅಸ್ತಮ ಮತ್ತು ನಿಮೋನಿಯಾ ರೋಗಿಗಳಿಗೆ ಬೆಳ್ಳುಳ್ಳಿ ಔಷಧಿಯಾಗಿ ಕೆಲಸ ಮಾಡುತ್ತದೆ.ಇದು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ದೇಹಕ್ಕೆ ಸಂಬಂಧಿಸಿದ ಹಲವು ಕಾಯಿಲೆಗಳನ್ನು ದೂರ ಮಾಡುತ್ತದೆ.
ಅಷ್ಟೇ ಅಲ್ಲದೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಆದಷ್ಟು ಸರಿಯಾಗಿ ವ್ಯಾಯಾಮ, ದೈಹಿಕ ಕಸರತ್ತು ಆಹಾರ ಸೇವನೆ ಇಲ್ಲದೆ ಇಂದಿನ ದಿನಗಳಲ್ಲಿ ಅನೇಕ ಸಮಸ್ಯೆಗಳು ಕಾಡುತ್ತಿದ್ದರೆ ಬೆಳ್ಳುಳ್ಳಿ ಸೇವನೆಯಿಂದ ಅನೇಕ ಲಾಭಗಳನ್ನು ಪಡೆದುಕೊಳ್ಳಬಹುದು. ಬೆಳ್ಳುಳ್ಳಿ ಸೇವನೆಯಿಂದ ದೇಹದಲ್ಲಿ ರಕ್ತ ಶುದ್ಧಿಯಾಗುತ್ತದೆ ಮತ್ತು ಮುಖದಲ್ಲಿ ಮೊಡವೆಗಳು ಮಾಯವಾಗುತ್ತವೆ.ಅಷ್ಟೇ ಅಲ್ಲದೆ ಬಿಪಿ ಕೂಡ ನಿಯಂತ್ರಣದಲ್ಲಿರುತ್ತದೆ. ಬಿಕ್ಕಳಿಕೆ ಸಮಸ್ಯೆಯನ್ನು ಕೂಡ ದೂರಮಾಡುತ್ತದೆ.