ವೈದ್ಯಕೀಯ ತಜ್ಞರ ಪ್ರಕಾರ ಅಂಜೂರದಲ್ಲಿ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ಅಂಜೂರದಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಯೋಜನಕಾರಿ ಖನಿಜಗಳಿವೆ.
ಅಂಜೂರ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಈ ಹಣ್ಣುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ನೀವು ಕೂಡ ಪ್ರತಿದಿನ ಅಂಜೂರದ ಹಣ್ಣುಗಳನ್ನು ಸೇವಿಸಿದರೆ, ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಹಸಿ ಅಂಜೂರದ ಜೊತೆಗೆ ಒಣಗಿದ ಅಂಜೂರದ ಹಣ್ಣುಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತೂಕ ಇಳಿಸಿಕೊಳ್ಳುವುದರಿಂದ ಇತರೆ ಹಲವು ಸಮಸ್ಯೆಗಳಿಗೆ ಅಂಜೂರವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ಆಗುವ ಲಾಭಗಳೇನು ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಅಂಜೂರವನ್ನು ನೆನೆಸಿಟ್ಟಾಗ ಮೃದು ಹಾಗೂ ಹೆಚ್ಚು ರುಚಿಕರವಾಗುತ್ತದೆ. ರಾತ್ರಿ ಮಲಗುವ ಮುನ್ನ ಅರ್ಧ ಲೋಟ ನೀರಿನಲ್ಲಿ 3 ಒಣ ಅಂಜೂರಗಳನ್ನು ನೆನೆಸಿಟ್ಟು ಮರುದಿನ ಬೆಳಗ್ಗೆ ಖಾಲಿಹೊಟ್ಟೆಯಲ್ಲಿ ಅಂಜೂರವನ್ನು ಸೇವಿಸಿದರೆ ಹಲವಾರು ಆರೋಗ್ಯಕರ ಪ್ರಯೋಜನಗಳು ನಿಮಗೆ ಸಿಗುತ್ತವೆ.
ಅಂಜೂರದಲ್ಲಿ ಸತು, ಮ್ಯಾಂಗನೀಸ್, ಮೆಗ್ನೀಶಿಯಂ, ಕಬ್ಬಿಣ ಮೊದಲಾದ ಖನಿಜಗಳು ಉತ್ತಮ ಪ್ರಮಾಣದಲ್ಲಿವೆ. ಇವು ವ್ಯಕ್ತಿಯ ಫಲವತ್ತತೆ ಹೆಚ್ಚಿಸಲು ನೆರವಾಗುತ್ತವೆ. ವಿಶೇಷವಾಗಿ ಅಧಿಕ ಸಾಂದ್ರತೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಕರಗುವ ನಾರುಗಳು ರಸದೂತಗಳ ಅಸಮತೋಲನ ಸರಿಪಡಿಸುತ್ತವೆ.
ಅಂಜೂರದಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಶಿಯಂ ಇದೆ. ಇದು ದೇಹದ ಸಕ್ಕರೆಯ ಮಟ್ಟ ನಿಯಂತ್ರಿಸಲು ನೆರವಾಗುತ್ತದೆ. ಅಂಜೂರದಲ್ಲಿರುವ ಕ್ಲೋರೋಜೀನಿಕ್ ಆಮ್ಲ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಗೊಳಿಸಲು ಸಹಕಾರಿ.
ಟೈಪ್ 2 ಮಧುಮೇಹಿಗಳು ನೆನೆಸಿಟ್ಟ ಅಂಜೂರ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂಜೂರವನ್ನು ಬೆಳಗ್ಗಿನ ಪ್ರಥಮ ಆಹಾರವಾಗಿ ಸೇವಿಸುವುದು ನಿಮಗೆ ಅನೇಕ ಪ್ರಯೋಜನ ನೀಡುತ್ತದೆ.
ಅಂಜೂರದಲ್ಲಿರುವ ನಾರಿನಂಶ ಜೀರ್ಣಕ್ರಿಯೆ ಸುಲಭಗೊಳಿಸುತ್ತದೆ. ಜೀರ್ಣಕ್ರಿಯೆ ಸುಲಭಗೊಂಡರೆ ಮಲಬದ್ದತೆಯ ತೊಂದರೆಗೆ ಮುಕ್ತಿ ದೊರೆಯುತ್ತದೆ. ಹೀಗಾಗಿ ಈ ಸಮಸ್ಯೆ ಇರುವವರು ಅಂಜೂರ ಸೇವಿಸಬೇಕು.