ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಿಂದ ಇಂದು ಮಧ್ಯಾಹ್ನ ಪ್ರಕಟವಾಗಲಿದೆ.
ಇದನ್ನೂ ಓದಿ: ಉಚಿತ ಪಡಿತರ ಪಡೆಯುವವರಿಗೆ ಶಾಕಿಂಗ್ ! ಫ್ರೀ ರೇಶನ್ ನಿಲ್ಲಿಸಲು ಸರ್ಕಾರ ಚಿಂತನೆ
ಇನ್ನು ಡಿಕೆಶಿ ಜೊತೆ ಉಳಿದ ನಾಲ್ಕು ಆರೋಪಿಗಳಿಗೂ ಬೇಲ್ ಸಿಗಲಿದೆಯೋ ಇಲ್ಲವೊ ಎಂಬುದು ಇಂದು ಖಚಿತವಾಗಲಿದೆ. ತೀರ್ಪು ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, ಶರ್ಮಾ, ಸಚಿನ್ ನಾರಾಯಣ್, ಹನುಮಂತ್ ದೆಹಲಿಗೆ ತೆರಳಿದ್ದಾರೆ. ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ವಾದ ಮತ್ತು ಪ್ರತಿವಾದ ಮುಕ್ತಾಯವಾಗಿದೆ. ಈ ಹಿಂದೆ ವಿಚಾರಣೆ ನಡೆಸಿದ್ದ ದೆಹಲಿಯ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು. ಸದ್ಯ ಇದರ ತೀರ್ಪು ಇಂದು ಮಧ್ಯಾಹ್ನ 3 ಗಂಟೆಗೆಹೊರಬೀಳುವ ಸಾಧ್ಯತೆ ಇದೆ.
ಇನ್ನೊಂದೆಡೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ದಪ್ಪ ಸುನೀಲ್ ದತ್ ಯಾದವ್ ಸೋಮವಾರ ನೋಟಿಸ್ ನೀಡಿದ್ದಾರೆ. ಶಿವಕುಮಾರ್ ಪರವಾಗಿ ವಾದ ಮಂಡಿಸಿದ ಸಿಬಿಐ ಹಿರಿಯ ವಕೀಲರಾದ ಬಿವಿ ಆಚಾರ್ಯ ಮತ್ತು ಸಿಎಚ್ ಜಾಧವ್ ಅವರು ಡಿಕೆಶಿ ವಿರುದ್ಧ ಅಕ್ಟೋಬರ್ 3, 2020 ರಂದು ದಾಖಲಿಸಿದ ಎಫ್‌ಐಆರ್ ಕಾನೂನುಬಾಹಿರ ಎಂದು ಹೇಳಿದ್ದಾರೆ.
ಶಿವಕುಮಾರ್ ಪ್ರಕರಣದಲ್ಲಿ ಏಕೈಕ ಆರೋಪಿಯಾಗಿದ್ದರೂ, ಅವರ ಎಲ್ಲಾ ಕುಟುಂಬ ಸದಸ್ಯರ ಆಸ್ತಿಯನ್ನು ಅವರದೇ ಎಂದು ತೋರಿಸಲಾಗಿದೆ ಎಂದು ಅವರು ಅರ್ಜಿಯಲ್ಲಿ ಹೇಳಿದ್ದಾರೆ. “ಕುಟುಂಬದ ಸದಸ್ಯರು ಎಂಬ ಅಭಿವ್ಯಕ್ತಿ ಅಸ್ಪಷ್ಟ ಪದವಾಗಿದೆ. ಪ್ರಸ್ತುತ ಪ್ರಕರಣದಲ್ಲಿ, ಕುಟುಂಬದ ಸದಸ್ಯರ ಸಂಖ್ಯೆಯನ್ನು ಉಲ್ಲೇಖಿಸಲಾಗಿಲ್ಲ ಅಥವಾ ಅವರ ಗುರುತನ್ನು ಬಹಿರಂಗಪಡಿಸಲಾಗಿಲ್ಲ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
2017 ರ ಆಗಸ್ಟ್ 2 ರಂದು ಆದಾಯ ತೆರಿಗೆ ಇಲಾಖೆಯು ಕರ್ನಾಟಕ ಮತ್ತು ದೆಹಲಿಯಲ್ಲಿರುವ ಶಿವಕುಮಾರ್ ಅವರ ಆಸ್ತಿಗಳ ಮೇಲೆ ದಾಳಿ ನಡೆಸಿತ್ತು. ಈ ಪ್ರಕರಣವು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ. ಆಗಸ್ಟ್ 2018 ರಲ್ಲಿ, ಐಟಿ ಇಲಾಖೆಯ ಶೋಧದ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಪ್ರಕರಣವನ್ನು ದಾಖಲಿಸಿತು. ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಸೆಪ್ಟೆಂಬರ್ 2019 ರಲ್ಲಿ, ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕ್ರಮ ಕೈಗೊಳ್ಳುವಂತೆ ಇಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು. ಸೆಪ್ಟೆಂಬರ್ 25, 2019 ರಂದು ರಾಜ್ಯ ಸರ್ಕಾರವು ಶಿವಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದುವರೆಯಲು ಸಿಬಿಐಗೆ ಅನುಮತಿ ನೀಡಿತು. ಪ್ರಾಥಮಿಕ ವಿಚಾರಣೆಯ ನಂತರ, ಸಿಬಿಐ ಅಕ್ಟೋಬರ್ 3, 2020 ರಂದು ಎಫ್‌ಐಆರ್ ದಾಖಲಿಸಿದೆ. ಇದನ್ನು ಈಗ ಶಿವಕುಮಾರ್ ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.