ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಸಿಎಂ ಗದ್ದುಗೆಯ ಸದ್ದು ಜೋರಾಗಿದೆ. ತಂದೆ ಎಚ್.ಡಿ.ಕುಮಾರಸ್ವಾಮಿಗಾಗಿ ನಿಖಿಲ್ ಕುಮಾರಸ್ವಾಮಿ ತಮ್ಮ ರಾಜಕೀಯ ಭವಿಷ್ಯವನ್ನೇ ತ್ಯಾಗ ಮಾಡ್ತಾರಾ ಅನ್ನೋ ಪ್ರಶ್ನೆ ಮೂಡಿದೆ.
ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಚ್‍ಡಿಕೆಯವರನ್ನು ಸಿಎಂ ಮಾಡಲು ನಿಖಿಲ್ ಪ್ರಚಾರ ನಡೆಸುತ್ತಾರಂತೆ. ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದನ್ನು ಕೈಬಿಟ್ಟು ತಂದೆ ಪರ ನಿಖಿಲ್ ಪ್ರಚಾರಕ್ಕಿಳಿಯಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಅಣ್ಣಾ(ಎಚ್‍ಡಿಕೆ) ಈ ಬಾರಿ ಮುಖ್ಯಮಂತ್ರಿಯಾಗಬೇಕು.. ಅದೇ ನಮ್ಮ ಗುರಿ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಪ್ರಕರಣ : ಪರೀಕ್ಷೆ ಬರೆದಿದ್ದ 8 ಅಭ್ಯರ್ಥಿಗಳು ಅರೆಸ್ಟ್!
ಹೆಂಗಾದರೂ ಸರಿ ಕುಮಾರಸ್ವಾಮಿಯವರನ್ನು ಸಿಎಂ ಮಾಡಲೇಬೇಕೆಂದು ನಿಖಿಲ್ ಕುಮಾರಸ್ವಾಮಿ ಪಣತೊಟ್ಟಿದ್ದಾರೆ. ಮುಂಬರುವ ಚುನಾವಣಗೆ ಈಗಿನಿಂದಲೇ ಸಿದ್ಧತೆ ನಡೆಸುವಂತೆ ಜೆಡಿಎಸ್ ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದ್ದಾರೆ. ‘ನಾನು ಚುನಾವಣೆಗೆ ನಿಲ್ಲುವುದು.. ಬಿಡುವುದು.. ಸೆಕೆಂಡರಿ. ಆದರೆ ಅಣ್ಣ ಸಿಎಂ ಆಗಬೇಕು. ಕೆ.ಆರ್.ಪೇಟೆಯಲ್ಲಿ ಲೀಡ್ ಕೊಡ್ತೇವೆ ಎಂದು ಜೆಡಿಎಸ್ ಕಾರ್ಯಕರ್ತರು ಭರವಸೆ ನೀಡಿದ್ದಾರೆ. ಹೀಗಾಗಿ ನಾವು ಮುಂದಿನ ಚುನಾವಣೆಗೆ ರಣತಂತ್ರ ರೂಪಿಸಬೇಕೆಂದು’ ನಿಖಿಲ್ ಹೇಳಿದ್ದಾರಂತೆ.
ಈ ಬಾರಿ ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ ಭದ್ರತೆಗೆ ನಿಖಿಲ್ ಮುಂದಾಗಿದ್ದಾರೆ. ಈಗಾಗಲೇ ನಿಖಿಲ್ ಸ್ಪರ್ಧೆ ಬಗ್ಗೆ ಎಚ್‍ಡಿಕೆ ಸ್ಪಷ್ಟನೆ ನೀಡಿದ್ದಾರೆ. ನಿಖಿಲ್ ಸ್ಪರ್ಧೆ ಬಿಟ್ಟು ಪಕ್ಷ ಸಂಘಟನೆ ಮಾಡ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದರು. ತಂದೆಯ ಆಸೆಯಂತೆಯೇ ಪಕ್ಷ ಸಂಘಟನೆಗೆ ನಿಖಿಲ್ ಮುಂದಾಗಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಬೇಕೆಂದು ನಿಖಿಲ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಲ್ಲಾ ಒಳ್ಳೆಯದಾಗುತ್ತದೆ, ಬನ್ನಿ ಕೈಜೋಡಿಸಿ ಎಂದು ನಿಖಿಲ್ ಕಾರ್ಯಕರ್ತರಿಗೆ ಆತ್ಮ ಸ್ಥೈರ್ಯ ತುಂಬಿದ್ದಾರಂತೆ. ಹೀಗಾಗಿ ಮುಂಬರುವ ಚುನಾವಣೆಗೆ ಜೆಡಿಎಸ್ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಇದನ್ನೂ ಓದಿ: ನವೆಂಬರ್ 1 ರಂದು ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.