“ಪಿ ಎಸ್ ಐ ನೇಮಕಾತಿ ಮರು ಪರೀಕ್ಷೆ ನಡೆಸುವ ಬಗ್ಗೆ, ಶೀಘ್ರದಲ್ಲಿಯೇ ತೀರ್ಮಾನ”

ಬೆಂಗಳೂರು: ರದ್ದು ಪಡಿಸಿರುವ ಪಿ ಎಸ್ ಐ ಪರೀಕ್ಷೆಯ ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

ಸಚಿವರು, ಇಂದು, ತಮ್ಮ ನಿವಾಸದಲ್ಲಿ ಭೇಟಿಯಾದ ಪಿಎಸ್ ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳಿಗೆ, ಈ ಕುರಿತು ಭರವಸೆ ನೀಡಿದ್ದು, ಮರು ಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರಕಾರ ನಿರ್ಧಾರ ಕೈಗೊಳ್ಳಲಿದೆ, ಎಂದರು.

ಇದನ್ನೂ ಓದಿ: ಝವಾಹಿರಿ ಹತ್ಯೆಗೆ ಅಮೆರಿಕಾ ಹಾದಿ ಸುಗಮ ಮಾಡಿಕೊಟ್ಟಿದ್ದೇ ಉಗ್ರನ ಈ ಹವ್ಯಾಸ ..!

ಪಿ.ಎಸ್.ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ, ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ, ಮರು ಪರೀಕ್ಷೆ ನಡೆಸುವ  ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು, ಎಂದರು.

ರದ್ದಾದ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲಾ 56000 ಅಭ್ಯರ್ಥಿ ಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಪತ್ತೆಯಾಯ್ತು 8000 ವರ್ಷಗಳ ಪುರಾತನ ದೇವಾಲಯ!

ಮರು ಪರೀಕ್ಷೆ  ನಡೆಸುವುದು ತಡವಾದರೆ, ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ, ಪರೀಕ್ಷೆ ತಯಾರಿ ಮುಂದುವರೆಸಿ, ಎಂದು ಸಚಿವರು, ಕಿವಿಮಾತು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 



Source link

Leave a Comment