BJP PM Candidate: 2024ರ ಚುನಾವಣೆಗೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಘೋಷಿಸಿದ ಅಮಿತ್ ಶಾ

ನವದೆಹಲಿ: 2024ರಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸಲಿದ್ದು, ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ 2 ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿ ಯಾರಾಗ್ತಾರೆ ಅನ್ನೋದರ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ರಾಜಕೀಯದಿಂದ ನಿವೃತ್ತಿ ಹೊಂದಲಿದ್ದು, ಹೊಸ ಮುಖಗಳನ್ನು ಬಿಜೆಪಿ ಕಣಕ್ಕಿಳಿಸಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಲೇ ಇವೆ. ಇದಕ್ಕೆ ಇದೀಗ ಸ್ಪಷ್ಟಣೆ ನೀಡಿರುವ ಅಮತ್ ಶಾ, ಮೋದಿಯವರೇ 2024ರ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.  

ಇದನ್ನೂ ಓದಿ: mazon Great Freedom Festival: ಮೊಬೈಲ್ ಮೇಲೆ ಶೇ.40, ಟಿವಿಗಳಿಗೆ ಶೇ.60ರಷ್ಟು ರಿಯಾಯಿತಿ!

ಅಮಿತ್ ಶಾ ಹೇಳಿದ್ದೇನು?

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸಲು ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಅಮಿತ್ ಶಾ ಕರೆ ನೀಡಿದ್ದಾರೆ. ಪಾಟ್ನಾದಲ್ಲಿ ನಡೆದ ಬಿಜೆಪಿಯ ಎಲ್ಲಾ 7 ಮೋರ್ಚಾಗಳ ಮೊದಲ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಶಾ, ‘ಬೂತ್ ಮಟ್ಟದಲ್ಲಿ ದಲಿತರು, ಆದಿವಾಸಿಗಳು ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ದುರ್ಬಲ ವರ್ಗಗಳಿಗಾಗಿ ಮೋದಿಯವರ ರಾಜಕೀಯ ಅಭಿಯಾನವನ್ನು ಬೆಂಬಲಿಸಬೇಕು. ಬಿಜೆಪಿ ಮತ್ತು ಮೋದಿಯವರಿಗೆ ಬೆಂಬಲ ನೀಡುವಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಬೇಕು’ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರನ್ನು ಸತತ 3ನೇ ಅವಧಿಗೆ ಪಕ್ಷದ ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿದ್ದ ಪಕ್ಷದ ಹಿರಿಯ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಇದೇ ವೇಳೆ ಅಮಿತ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ.  

ಇದನ್ನೂ ಓದಿ: WhatsApp Mistakes: ಅಪ್ಪಿತಪ್ಪಿಯೂ ಗ್ರೂಪ್‌ಗಳಿಗೆ ಈ 4 ವಿಷಯ ಕಳುಹಿಸಬೇಡಿ..!

ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾತನಾಡಿ, ‘2024ರ ಲೋಕಸಭೆ ಮತ್ತು 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಸ್ಪರ್ಧಿಸಲಿವೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ’ವೆಂದು ತಿಳಿಸಿದರು.  ಬಿಹಾರದಲ್ಲಿ ಮೊದಲ ಬಾರಿಗೆ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು ಎಂದು ವರದಿಯಾಗಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.



Source link

Leave a Comment