ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರು ಸೇವಿಸಿ ಸಾಕು!

ಬೆಲ್ಲ ನೈಸರ್ಗಿಕ ಸಿಹಿಕಾರಕವಾಗಿದ್ದುವಾಗಿದ್ದು, ಇದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೆಲ್ಲದಿಂದ ಚಹಾ ಮತ್ತು ಹಲವು ಖಾದ್ಯಗಳನ್ನು ತಯಾರಿಸಲಾಗುತ್ತದೆ. ಬೆಲ್ಲವು ಪೊಟ್ಯಾಸಿಯಂ, ಕ್ಯಾಲ್ಸಿಯಂ, ಸತು, ರಂಜಕ ಮತ್ತು ತಾಮ್ರದಂತಹ ಜೀವಸತ್ವಗಳು ಮತ್ತು ಖನಿಜಗಳಿಂದ ಕೂಡಿದೆ. ಆದ್ದರಿಂದ ಬೆಲ್ಲದ ಸೇವನೆಯುಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆಯುರ್ವೇದದ ಪ್ರಕಾರ ಬಿಸಿನೀರಿಗೆ ಬೆಲ್ಲವನ್ನು ಬೆರೆಸಿ ಕುಡಿಯುವುದರಿಂದ, ಅದು ನೈಸರ್ಗಿಕ ಜೀರ್ಣಕಾರಿ ಕಿಣ್ವಗಳನ್ನು ಹೆಚ್ಚಿಸುತ್ತದೆ, ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ ಹಾಗೂ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ಬೆಳಗ್ಗೆ ಬೆಲ್ಲದ ನೀರನ್ನು ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ದೊರೆಯುತ್ತದೆ ಮತ್ತು ಅದನ್ನು ಹೇಗೆ ತಯಾರಿಸುವುದು ಎಂಬುದನ್ನು ತಿಳಿಯೋಣ.

ಬೆಲ್ಲದ ನೀರನ್ನು ಹೇಗೆ ತಯಾರಿಸುವುದು:

ರಾತ್ರಿ ಒಂದು ಲೋಟ ನೀರಿನಲ್ಲಿ ಬೆಲ್ಲದ ತುಂಡು ಹಾಕಿ ಮತ್ತು ಅದರಲ್ಲಿ ಸ್ವಲ್ಪ ಪುದೀನ ಮತ್ತು ಕೊತ್ತಂಬರಿ ಸೊಪ್ಪನ್ನು ಹಾಕಿ. ಮರುದಿನ ಬೆಳಗ್ಗೆ ಈ ಎಲ್ಲಾ ಪದಾರ್ಥಗಳನ್ನು ಚೆನ್ನಾಗಿ ಬೆರೆಸಿ ಮತ್ತು ಅದಕ್ಕೆ ನಿಂಬೆ ರಸವನ್ನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

ಬೆಲ್ಲದ ನೀರು ಕುಡಿಯುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳು:

ಮೂಳೆಗಳು ಬಲಗೊಳ್ಳುತ್ತವೆ:

ಸಾಮಾನ್ಯವಾಗಿ ಹೆಚ್ಚಿನ ಜನರಲ್ಲಿ ಸಂಧಿವಾತ ಮತ್ತು ಅಸ್ಟಿಯೊಪೊರೋಸಿಸ್ ನಂತಹ ಮೂಳೆ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ನಿತ್ಯವೂ ಬೆಲ್ಲವನ್ನು ಸೇವಿಸಿದರೆ ಮೂಳೆಗಳು ಬಲಗೊಳ್ಳುತ್ತವೆ. ಬೆಲ್ಲವು ಉರಿಯೂತ ವಿರೋಧಿ ಗುಣಲಕ್ಷಣಣವನ್ನು ಹೊಂದಿದ್ದು, ಇದು ನೋವು ಕಡಿಮೆ ಮಾಡಲು ಸಹಕಾರಿಯಾಗಿದೆ. ಆದ್ದರಿಂದ ಮೂಳೆ ಸಂಬಂಧಿ ರೋಗಗಳನ್ನು ತಡೆಗಟ್ಟಲು ಬೆಲ್ಲದ ನೀರನ್ನು ತೆಗೆದುಕೊಳ್ಳುವಂತೆ ಆಯುರ್ವೇದ ತಜ್ಞರು ಶಿಫಾರಸು ಮಾಡುತ್ತಾರೆ.

ಚರ್ಮಕ್ಕೆ ತುಂಬಾ ಪ್ರಯೋಜನಕಾರಿ:

ಪ್ರತಿದಿನ ಬೆಲ್ಲದ ನೀರನ್ನು ಸೇವನೆ ಮಾಡುವುದರಿಂದ ತ್ವಚೆಗೆ ಹಲವಾರು ಪ್ರಯೋಜನಗಳು ದೊರೆಯುತ್ತದೆ. ಇದು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತ ವಿರೋಧಿ ಗುಣಲಕ್ಷಣಗಳನ್ನು ಹೊಂದಿದ್ದು, ಇದು ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರೊಂದಿಗೆ ತ್ವಚೆಯನ್ನು ಹೊಳೆಯುವಂತೆ ಮಾಡಲು ಇದು ಸಹಕಾರಿಯಾಗಿದೆ.

ದೇಹದಿಂದ ವಿಷವನ್ನು ಹೊರಹಾಕಲು ಸಹಕಾರಿ:

ಬೆಲ್ಲವು ದೇಹವನ್ನು ಶುದ್ಧೀಕರಿಸುವಲ್ಲಿ ಸಹಾಯ ಮಾಡುವ ಗುಣಗಳನ್ನು ಹೊಂದಿದೆ. ಇದು ನೈಸರ್ಗಿಕವಾಗಿ ದೇಹದಿಂದ ವಿಷವನ್ನು ಹೊರಹಾಕುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ, ಯಕೃತ್ತನ್ನು ಶುದ್ಧಗೊಳಿಸುತ್ತದೆ. ಅದಕ್ಕಾಗಿಯೇ ಆಯುರ್ವೇದ ತಜ್ಞರು ದೇಹವನ್ನು ನಿರ್ವಿಷಗೊಳಿಸಲು ಬೆಲ್ಲದ ನೀರಿನ ಸಹಾಯವನ್ನು ತೆಗೆದುಕೊಳ್ಳುವಂತೆ ಶಿಫಾರಸು ಮಾಡುತ್ತಾರೆ. ಪ್ರತಿದಿನ ಬೆಳಗ್ಗೆ ಈ ನೀರನ್ನು ಕುಡಿದರೆ ದೇಹದಿಂದ ಹಾನಿಕಾರಕ ಅಂಶಗಳು ಹೊರಹೋಗುತ್ತವೆ.

ಚಯಾಪಚಯ ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ:

ಬೆಲ್ಲವು ಮೆಗ್ನೇಸಿಯಂ, ವಿಟಮಿನ್ ಬಿ1, ವಿಟಮಿನ್ ಬಿ6 ಮತ್ತು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಹಾಗೂ ಉತ್ಕರ್ಷಣ ನಿರೋಧಕಗಳು, ಸತು, ಸೆಲೆನಿಯಂ ನಂತಹ ಖನಿಜಗಳಿಂದ ಇದು ಸಮೃದ್ಧವಾಗಿದೆ. ಆದ್ದರಿಂದ ನೀವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ನೀರನ್ನು ಸೇವಿಸಿದರೆ ಅದು ನಿಮ್ಮ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ರಕ್ತಹೀನತೆಗೆ ಚಿಕಿತ್ಸೆ ನೀಡುತ್ತದೆ:

ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ ಕಡಿಮೆಯಿದ್ದರೆ, ಬೆಲ್ಲದ ನೀರನ್ನು ಸೇವನೆ ಮಾಡುವುದು ಉತ್ತಮ. ಏಕೆಂದರೆ ಇದು ಕಬ್ಬಿಣ ಮತ್ತು ಫೋಲೇಟ್ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಿದೆ.

ದೇಹದ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಕಾರಿ:

ಬೆಲ್ಲದ ನೀರನ್ನು ಸೇವಿಸುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ನೀವು ಹೆಚ್ಚು ಕ್ರೀಯಾಶೀಲರಾಗಿ ಮತ್ತು ಉಲ್ಲಾಸದಿಂದಿರುವಿರಿ. ಅದಕ್ಕಾಗಿಯೇ ಇದರ ಸೇವನೆಯು ಪ್ರಯೋಜನಕಾರಿಯಾಗಿದೆ.

Leave a Comment