ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 91ನೇ ಆವೃತ್ತಿಯ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಜೇನುಕೃಷಿಕ ಮತ್ತು ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾರತ ತನ್ನ 75 ವರ್ಷಗಳ ಸ್ವಾತಂತ್ರ್ಯವನ್ನು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಎಂದು ಆಚರಿಸುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ‘ಪ್ರಧಾನಿ ಮೋದಿಯವರು ಇಂದು ತಮ್ಮ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ #ಅಮೃತಭಾರತಿಗೆಕನ್ನಡದಾರತಿ ಕಾರ್ಯಕ್ರಮವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಪ್ರಧಾನಿ ಅವರ ಈ ಶ್ಲಾಘನೆ ನಮ್ಮ ಉತ್ಸಾಹವನ್ನು ಹೆಚ್ಚಿಸಿದೆ’ ಎಂದು ಖುಷಿಪಟ್ಟಿದ್ದಾರೆ.
ಜೇನು ಸಾಕಣೆಯಲ್ಲಿ ಸಾಧನೆ ಮಾಡಿದ ಕರ್ನಾಟಕದ ಮಧುಕೇಶ್ವರ ಹೆಗಡೆ ಅವರನ್ನು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಶ್ಲಾಘಿಸಿದ ಪ್ರಧಾನಿ ಶ್ರೀ @narendramodi#MannKiBaat pic.twitter.com/uv7wMHzTMA
— BJP Karnataka (@BJP4Karnataka) July 31, 2022
ಇದನ್ನೂ ಓದಿ: Monkeypox Case : ರಾಜ್ಯದ ಜನರೇ ಎಚ್ಚರ : ಬೆಂಗಳೂರಲ್ಲಿ ಮಂಕಿಪಾಕ್ಸ್ ಗುಣಲಕ್ಷಣಗಳಿರುವ ವ್ಯಕ್ತಿ ಪತ್ತೆ
‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 75 ಕಡೆ ವಿವಿಧ ಕಾರ್ಯಕ್ರಮ ಆಯೋಜಿಸಿ ಕರ್ನಾಟಕದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿರುವುದು ಮಾತ್ರವಲ್ಲದೆ, ಸ್ಥಳೀಯ ಸಂಸ್ಕೃತಿ, ಕಲೆ, ಸಾಹಿತ್ಯಕ್ಕೂ ಒತ್ತು ನೀಡಿರುವುದು ಪ್ರಶಂಸನೀಯ’ ಎಂದು ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಪ್ರಧಾನಿ ಮೋದಿ ಮುಕ್ತ ಕಂಠದಿಂದ ಹೊಗಳಿದ್ದಾರೆ.
ಜೇನು ಕೃಷಿಕನ ಸಾಧನೆಗೆ ಮೆಚ್ಚುಗೆ
31-07-2022 ರಂದು ನಡೆದ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ @narendramodi ಅವರ ಸಂದೇಶ#MannKiBaat pic.twitter.com/XfDpLIopj5
— BJP Karnataka (@BJP4Karnataka) July 31, 2022
ಪ್ರಧಾನಿ ಮೋದಿ ತಮ್ಮ ‘ಮನ್ ಕೀ ಬಾತ್’ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಜೇನು ಕೃಷಿಕನ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಕರಾವಳಿ, ಮಲೆನಾಡು, ಉತ್ತರ ಕನ್ನಡ ಭಾಗದ ಹಲವು ಕೃಷಿಕರಿಗೆ ಜೇನು ಸಾಕಣೆ ವಿಶೇಷ ಹವ್ಯಾಸವಾಗಿದೆ. ಜೇನು ಸಾಕಣೆಯಲ್ಲಿ ಸಾಧನೆ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮಧುಕೇಶ್ವರ ಹೆಗಡೆ ಅವರನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
‘ಕೇಂದ್ರ ಸರ್ಕಾರದ ಸಬ್ಸಿಡಿ ಪಡೆದು ಮಧುಕೇಶ್ವರ ಹೆಗಡೆ ಅವರು 50 ಪೆಟ್ಟಿಗೆ ಜೇನು ಹುಳಗಳ ಸಾಕಾಣಿಕೆ ಪ್ರಾರಂಭಿಸಿದ್ದರು. ಇಂದು 800ಕ್ಕೂ ಹೆಚ್ಚು ಪೆಟ್ಟಿಗೆಗಳು ಅವರ ಬಳಿ ಇವೆ. ಮಧು ಅಂದರೆ ಜೇನು, ಜೇನುಕೃಷಿಯಲ್ಲಿ ಅವರು ಹಲವು ಆವಿಷ್ಕಾರಗಳನ್ನು ಮಾಡಿ ತಮ್ಮ ಹೆಸರನ್ನು ಸಾರ್ಥಕಗೊಳಿಸಿದ್ದಾರೆ’ ಎಂದು ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
“ಪ್ರಧಾನಮಂತ್ರಿ ಶ್ರೀ @narendramodi ಅವರು ಇಂದು ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ #ಅಮೃತಭಾರತಿಗೆಕನ್ನಡದಾರತಿ ಕಾರ್ಯಕ್ರಮವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಪ್ರಧಾನಿ ಅವರ ಈ ಶ್ಲಾಘನೆ ನಮ್ಮ ಉತ್ಸಾಹವನ್ನು ಹೆಚ್ಚಿಸಿದೆ.” @BSBommai pic.twitter.com/k9KVcs8WBb
— CM of Karnataka (@CMofKarnataka) July 31, 2022
ಇದನ್ನೂ ಓದಿ: ಅಸಮರ್ಥ ‘ಡಬಲ್ ಎಂಜಿನ್ ಸರ್ಕಾರ’ ಡಬಲ್ ಗೇಮ್ ಆಡುತ್ತಿದೆ: ಎಚ್‌ಡಿಕೆ ಆಕ್ರೋಶ
ಡಿಪಿಯಾಗಿ ತ್ರಿವರ್ಣ ಧ್ವಜ ಬಳಸಿ
‘ಹರ್ ಘರ್ ತಿರಂಗಾ’ ಅಭಿಯಾನ ಕುರಿತು ಮಾಹಿತಿ ನೀಡಿದ ಪ್ರಧಾನಿ ಮೋದಿ ಆಗಸ್ಟ್ 15ರವೆಗೆ ಭಾರತದ ತ್ರಿವರ್ಣ ಧ್ವಜವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಡಿಪಿಯಾಗಿ ಬಳಸಿ ಎಂದು ಸಲಹೆ ನೀಡಿದ್ದಾರೆ. ಆಗಸ್ಟ್ 2 ರಿಂದ 15ರವರೆಗೆ ನಾವೆಲ್ಲರೂ ನಮ್ಮ ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋದಲ್ಲಿ ತಿರಂಗಾ ಹಾಕಬಹುದು. ತಿರಂಗಾಕ್ಕೆ ಸಂಬಂಧಿಸಿದಂತೆ ಆಗಸ್ಟ್ 2 ಒಂದು ವಿಶೇಷ ದಿನ. ಈ ದಿನ ನಮ್ಮ ರಾಷ್ಟ್ರಧ್ವಜವನ್ನು ವಿನ್ಯಾಸ ಮಾಡಿದ ಪಿಂಗಳಿ ವೆಂಕಯ್ಯರ ಜನ್ಮದಿನ. ಅವರಿಗೆ ಆದರಪೂರ್ವಕ ಶ್ರದ್ಧಾಂಜಲಿ ಅರ್ಪಿಸೋಣ ಹಾಗೂ ಮೇಡಂ ಕಾಮಾ ಅವರನ್ನೂ ಸ್ಮರಿಸೋಣ. ರಾಷ್ಟ್ರಧ್ವಜಕ್ಕೆ ಆಕಾರ ನೀಡುವಲ್ಲಿ ಮೇಡಂ ಕಾಮಾ ಕೊಡುಗೆ ಮಹತ್ವಪೂರ್ಣವಾಗಿದೆ’ ಎಂದು ಮೋದಿ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.