ಬಾಳೆ ಎಲೆಯಲ್ಲಿ ಏಕೆ ಊಟ ಮಾಡಬೇಕು? ವೈಜ್ಞಾನಿಕ ಕಾರಣಗಳೇನು!

ಆಧುನಿಕ ಪದ್ಧತಿಗೆ ಒಗ್ಗಿಕೊಂಡಿರುವ ನಾವು ಕೆಲವು ಅತ್ಯುತ್ತಮ ಹಳೆಯ ಆಚಾರ ವಿಚಾರಗಳನ್ನು ಮೂಲೆ ಗುಂಪಾಗಿಸಿದ್ದೇವೆ. ಅವುಗಳಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವ ಪದ್ಧತಿಯೂ ಒಂದು. ಹಿಂದೂ ಧರ್ಮದ ಶಾಸ್ತ್ರಗಳಲ್ಲಿ ಮತ್ತು ಸಮಾರಂಭಗಳಲ್ಲಿ ಬಾಳೆಗೆ ಮತ್ತು ಬಾಳೆ ಎಲೆಗೆ ತನ್ನದೆ ಆದ ಮಹತ್ವ ಇದೆ. ಬಾಳೆ ಎಲೆಯ ಮೇಲೆ ಮಾಡುವ ಊಟದ ರುಚಿಯೇ ಬೇರೆ. ಅದು ಸಂಪ್ರದಾಯ ಕೂಡಾ ಹೌದು. ಹಾಗಾಗಿಯೇ, ಮದುವೆ, ದೇವಾಲಯಗಳ ಪ್ರಸಾದ ಭೋಜನ, ಅನ್ನಸಂತರ್ಪಣೆಗಳಲ್ಲಿ ಬಾಳೆ ಎಲೆಯ ಮೇಲೆ ಊಟವನ್ನು ಬಡಿಸಲಾಗುತ್ತದೆ.

ಮನೆಯ ಮುಂದೆ ಮತ್ತು ಹಿತ್ತಲಿನ ತೋಟದಲ್ಲಿ ಬಾಳೆಗಿಡಗಳನ್ನು ಬೆಳೆಸುವುದು ಶುಭಕರ. ಜೊತೆಗೆ ಬಾಳೆ ಎಲೆಯಲ್ಲಿ ಊಟ ಮಾಡಿದರೆ ಕೆಲ ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು.

ಜೀರ್ಣಕ್ರಿಯೆ:ಬಾಳೆ ಎಲೆಯ ಮೇಲ್ಪದರದ ರಚನೆಯಲ್ಲಿ ಎಪಿಗಾಲ್ಸೋಕ್ಯಾಟಿಚಿನ್ ಗ್ಯಾಲೆಟ್ ಎಂಬ ಪಾಲಿಫಿನಾಲ್ ಅಂಶವಿರುತ್ತದೆ. ಬಿಸಿ ಆಹಾರ ಎಲೆಗೆ ಬಿದ್ದ ತಕ್ಷಣ ಇವು ಆಹಾರದೊಂದಿಗೆ ಬೆರೆತು ನಮ್ಮ ಹೊಟ್ಟೆ ಸೇರುತ್ತವೆ. ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ.

ಕ್ಯಾನ್ಸರ್ ರೋಗ ತಡೆಯುತ್ತದೆ:ಬಾಳೆ ಎಲೆಯ ಮೇಲೆ ಬ್ಯಾಕ್ಟೀರಿಯಾಗಳು ಬಾಳುವುದಿಲ್ಲ. ಇದರಲ್ಲಿ ಏನೇ ಆಹಾರ ಬಡಿಸಿದರೂ ಹೊಟ್ಟೆಗೆ ಹೋಗುವ ಮುನ್ನವೇ ಕೊಲ್ಲಲ್ಪಡುತ್ತವೆ. ಅದರಲ್ಲೂ ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ಪ್ರೀ ರ್ಯಾಡಿಕಲ್ ಎಂಬ ಜೈವಿಕ ರಾಸಾಯನಿಕಗಳನ್ನು ದೇಹ ಸೇರಲು ಬಿಡಲ್ಲ.

ದೇಹಕ್ಕೆ ತಂಪು:ಬಾಳೆ ಎಲೆ ಊಟ ದೇಹಕ್ಕೆ ತಂಪು. ಗ್ಯಾಸ್ ಅಡುಗೆಯಿಂದ ಆಹಾರ ಸೇರಿಕೊಳ್ಳುವ ಕೃತಕ ಉಷ್ಣವೂ ಇಲ್ಲಿ ತಣ್ಣಗಾಗುತ್ತದೆ.

Leave a Comment