ಹುಬ್ಬಳ್ಳಿ: ಸಿದ್ಧರಾಮೋತ್ಸವ ಕಾರ್ಯಕ್ರದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ರಾತ್ರಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಸಭೆಯನ್ನು ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ‘ರಾಜಕೀಯ ವ್ಯವಹಾರಗಳ ಸಮಿತಿ’ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @kcvenugopalmp
ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಧಾನಸಭೆ ವಿಪಕ್ಷ ನಾಯಕರಾದ @siddaramaiah, ವಿಧಾನ ಪರಿಷತ್ ವಿಪಕ್ಷ ನಾಯಕರಾದ @HariprasadBK2 ಉಪಸ್ಥಿತರಿದ್ದರು. pic.twitter.com/OGpYcSQd2k
— Karnataka Congress (@INCKarnataka) August 2, 2022
ಸಭೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ ಬಿ ಪಾಟೀಲ್ ಸೇರಿದಂತೆ ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿಯ ಸದಸ್ಯರೆಲ್ಲರೂ ಹಾಜರಿದ್ದರು. ರಾಜ್ಯದ ಮುಂದಿನ ಚುನಾವಣೆಯಲ್ಲಿ ಜನ-ವಿರೋಧಿ ಸರ್ಕಾರವನ್ನು ಸೋಲಿಸಿ ಜನಪರ ಆಡಳಿತ ಸ್ಥಾಪಿಸುವ ನಿಟ್ಟಿನಲ್ಲಿ ಪಕ್ಷದ ಚಟುವಟಿಕೆ ಆಯೋಜಿಸುವ ಕುರಿತು ಚರ್ಚೆ ನಡೆಸಲಾಯಿತು.
ಇಂದು ಹುಬ್ಬಳ್ಳಿಗೆ ಆಗಮಿಸಿದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಶ್ರೀ @RahulGandhi ಅವರನ್ನು
ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. pic.twitter.com/RUzvp4Gjgw
— Karnataka Congress (@INCKarnataka) August 2, 2022
ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ರಾತ್ರಿ ನಡೆದ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ , ಈಶ್ವರ್ ಖಂಡ್ರೆ, ಧ್ರುವನಾರಾಯಣ್, ಸತೀಶ್ ಜಾರಕಿಹೊಳಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ , ಕೆಪಿಸಿಸಿ ಪ್ರನಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ, ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಹಾಗೂ ದಿನೇಶ್ ಗೂಂಡುರಾವ್, ಹೆಚ್.ಕೆ ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ , ಎಐಸಿಸಿ ಕಾರ್ಯದರ್ಶಿಗಳು,ಮತ್ತಿತರ ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು, ಎಂಎಲ್ಸಿಗಳು ಭಾಗವಹಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.