Skin care :ಬೇಸಿಗೆ ಕಾಲ ಆರಂಭವಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲು ಮತ್ತು ಬೆವರು ಇವೆರಡು ತ್ವಚೆಯನ್ನು ಹಾಳು ಮಾಡುತ್ತವೆ. ಇದರ ಜೊತೆಗೆ ತ್ವಚೆಯನ್ನು ಸೂರ್ಯನ ಬೆಳಕಿನಿಂದ ಕಾಪಾಡಿಕೊಳ್ಳುವುದು ಸಹ ತುಂಬಾ ಮುಖ್ಯವಾಗಿದೆ. ಹೀಗಾಗಿ ಬಿಸಿಲಿನಲ್ಲಿ ತ್ವಚೆಯನ್ನು ಆರೈಕೆಗೆ ಕೆಲವೊಂದು ಸಲಹೆಗಳನ್ನು ಅನುಸರಿಸಿ.
Body Heat :ದೇಹದ ಉಷ್ಣತೆ ಶೀಘ್ರವಾಗಿ ಕಡಿಮೆ ಆಗಬೇಕು ಎಂದರೆ ಒಂದು ಕಪ್ ಇದನ್ನು ತಿನ್ನಿ ಸಾಕು!
ದಿನಕ್ಕೆ ಕನಿಷ್ಠ 2 ಬಾರಿ ಮುಖ ಸ್ವಚ್ಛಗೊಳಿಸಿ: ಬೇಸಿಗೆಕಾಲದಲ್ಲಿ ಬಿಸಿಲಿನಿಂದಾಗಿ ಹೆಚ್ಚಾಗಿ ಬೆವರುತ್ತೇವೆ. ಅಷ್ಟೇ ಅಲ್ಲದೇ ಚರ್ಮದಲ್ಲಿಯೂ ಹೆಚ್ಚು ಎಣ್ಣೆ ಅಂಶ ಕಾಣಿಸುತ್ತದೆ. ಇದರಿಂದಾಗಿ ದಿನಕ್ಕೆ 2 ಬಾರಿ ಮುಖವನ್ನು ಸ್ವಚ್ಛಗೊಳಿಸುವುದು ಒಳ್ಳೆಯದು. ಉಗುರು ಬೆಚ್ಚಗಿನ ನೀರಿನಿಂದ ಮುಖವನ್ನು ತೊಳೆಯುವ ಮೊದಲು ಒಂದು ನಿಮಿಷಗಳ ಕಾಲ ಮುಖದ ಮೇಲೆ ಮೃದುವಾದ ಮಸಾಜ್ ಮಾಡಿ.
ಸನ್‍ಸ್ಕ್ರೀನ್ ಹೆಚ್ಚು ಬಳಸಿ: ಬಿಸಿಲಿನ ಕಿರಣದಿಂದಾಗಿ ಚರ್ಮವು ಸುಡುವುದಷ್ಟೇ ಅಂದ ಕೆಡುತ್ತದೆ. ಹೀಗಾಗಿ ನೀವು ಹೊರಗಡೆ ಹೋಗುವ ಮುನ್ನ ಸನ್‍ಸ್ಕ್ರೀನ್‍ಗಳನ್ನು ಬಳಸುವುದು ಅಗತ್ಯವಾಗಿದೆ. ಇದರಿಂದಾಗಿ ತಕ್ಕಮಟ್ಟಿಗೆ ನಿಮ್ಮ ಚರ್ಮದ ತ್ವಚೆಯು ಕೆಡದಂತೆ ನೋಡಿಕೊಳ್ಳಲು ಸಾಧ್ಯವಾಗುತ್ತದೆ.
ಅಲೋವೆರಾ : ಲೋಳೆರಸ ಬಿಸಿಲಿನಿಂದ ಸುಟ್ಟ ಗಾಯಕ್ಕೆ ಶಮನ ನೀಡುವುದಲ್ಲದೆ, ಚರ್ಮದಲ್ಲಿ ತೇವಾಂಶವನ್ನು ಧನಾತ್ಮಕವಾಗಿ ಕಾಪಾಡುತ್ತದೆ. ತಾಜಾ ಅಲೋವೆರಾ ತೆಗೆದು ಅದನ್ನು ಸಂಪೂರ್ಣವಾಗಿ ಮುಖಕ್ಕೆ ಮಸಾಜ್ ಮಾಡಿ. ಅಲೋವೆರಾ ಲೋಳೆಯನ್ನು ಐಸ್ ಟ್ರೇಗೆ ಹಾಕಿಟ್ಟು ಬಳಿಕ ಅದನ್ನು ಮುಖಕ್ಕೆ ಉಜ್ಜಿಕೊಳ್ಳಿ.
Body Heat :ದೇಹದ ಉಷ್ಣತೆ ಶೀಘ್ರವಾಗಿ ಕಡಿಮೆ ಆಗಬೇಕು ಎಂದರೆ ಒಂದು ಕಪ್ ಇದನ್ನು ತಿನ್ನಿ ಸಾಕು!
ಸೌತೆಕಾಯಿ: ಸೌತೆಕಾಯಿ ಬೇಸಿಗೆಯಲ್ಲಿ ಚರ್ಮಕ್ಕೆ ಹಿತ ನೀಡುವುದಲ್ಲದೆ, ತಾಜಾ ಮತ್ತು ಹೊಳೆಯುವಂತೆ ಮಾಡುತ್ತದೆ. ದಿನನಿತ್ಯವು ಸೌತೆಕಾಯಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ. ಇದರಿಂದ ಬಿಸಿಲಿನಿಂದಾಗುವ ಕಪ್ಪು ಕಲೆಗಳು ಕಡಿಮೆಯಾಗುತ್ತದೆ. ಮುಖಕ್ಕೆ ಸೌತೆಕಾಯಿ, ಮೊಸರು ಲೇಪನವನ್ನು ಹಚ್ಚಿದರೆ ತಂಪಾಗುತ್ತದೆ. ಜೊತೆಗೆ ಹೊಳಪು ಬರುತ್ತದೆ.
Skin care ಮಲಗುವ ಮುನ್ನ ಚರ್ಮಕ್ಕೆ ಆರೈಕೆ ಹೀಗಿರಲಿ: ಬೇಸಿಗೆಯಲ್ಲಿ ರಾತ್ರಿ ಸಮಯದಲ್ಲಿ ಚರ್ಮದ ಆರೈಕೆಯನ್ನು ಕಡೆಗಣಿಸುವಂತಿಲ್ಲ. ಮಲಗುವ ಮುನ್ನ ಕೊಬ್ಬರಿ ಎಣ್ಣೆ ಹಾಗೂ ನೈಟ್ ಕ್ರೀಮ್‍ಗಳನ್ನು ಬಳಸಿ. ಇದರಿಂದಾಗಿ ಚರ್ಮದದಲ್ಲಿ ಉಂಟಾದ ಡ್ಯಾಮೇಜ್‍ಗಳನ್ನು ಸರಿಪಡಿಸಬಹುದಾಗಿದೆ.