Har Ghar Tiranga: ರಾಜ್ಯದ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ- ಸಿಎಂ ಬೊಮ್ಮಾಯಿ

ಬೆಂಗಳೂರು: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನ ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ(ಆಗಸ್ಟ್ 8) ಅಭಿಯಾನದ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ‘ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಿದ್ರೆಯಲ್ಲಿಯೂ ಕೇಸರಿ ಬಣ್ಣವನ್ನು ದ್ವೇಷಿಸುತ್ತಾರೆ: ಕಟೀಲ್ ರಾಜ್ಯದಲ್ಲಿ … Read more

ನವೆಂಬರ್ 1 ರಂದು ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ

ಬೆಂಗಳೂರು: ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಇನ್ಮುಂದೆ ನೀವು ಡ್ರೈವಿಂಗ್ ಲೈಸನ್ಸ್ ಗಾಗಿ ಆರ್‌ಟಿಒ ಬಳಿ ಡ್ರೈವಿಂಗ್ ಟೆಸ್ಟ್ ಮಾಡುವಂತಿಲ್ಲ…! ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು … Read more

ಮಂಕಿಪಾಕ್ಸ್ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ಮಂಕಿಪಾಕ್ಸ್ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿದ ಸೂಚನೆಗಳು 1. ದೇಶದಲ್ಲಿ ಆರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಸೋಂಕಿತರ ಪರೀಕ್ಷೆಗೆ ಸೂಕ್ತ ಕ್ರಮ ವಹಿಸಬೇಕು.  2. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ಸೋಂಕು ಧೃಢಪಟ್ಟ ವ್ಯಕ್ತಿಗಳನ್ನು 21 ದಿನಗಳ ಕ್ವಾರಂಟೈನ್ ಮಾಡುವುದು ಸೇರಿದಂತೆ ಅಗತ್ಯ … Read more

Mann Ki Baat: ಕರ್ನಾಟಕದ ಜೇನುಕೃಷಿ ಮತ್ತು ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 91ನೇ ಆವೃತ್ತಿಯ ‘ಮನ್ ಕೀ ಬಾತ್‍’ ಕಾರ್ಯಕ್ರಮದಲ್ಲಿ ಕರ್ನಾಟಕದ ಜೇನುಕೃಷಿಕ ಮತ್ತು ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತ ತನ್ನ 75 ವರ್ಷಗಳ ಸ್ವಾತಂತ್ರ್ಯವನ್ನು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಎಂದು ಆಚರಿಸುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ‘ಪ್ರಧಾನಿ ಮೋದಿಯವರು ಇಂದು … Read more