Siddaramotsava: ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ!?’

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜಿಸಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮವನ್ನು ಟೀಕಿಸಿರುವ ಬಿಜೆಪಿ, ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮದ ವಾತಾವರಣ ಎಷ್ಟು ಸರಿ!?’ ಎಂದು ಪ್ರಶ್ನಿಸಿದೆ. #ಜನವಿರೋಧಿಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅಮೃತ ಮಹೋತ್ಸವ ಮತ್ತು ಕರ್ನಾಟಕ. ರಾಜ್ಯದಲ್ಲಿ ಮೂವರು ಹತ್ಯೆಗೀಡಾಗಿದ್ದಾರೆ, ಕಳೆದೆರೆಡು ದಿನಗಳಲ್ಲಿ 11 ಸಾವು ಸಂಭವಿಸಿದೆ ಮತ್ತು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಕಾಂಗ್ರೆಸ್ಸಿಗರೇ ಸೂತಕದ … Read more

ಇದು ಸಿದ್ದರಾಮೋತ್ಸವವಲ್ಲ ಕಾಂಗ್ರೆಸ್ ಅಂತ್ಯೋತ್ಸವ: ಬಿಜೆಪಿ ಟೀಕೆ

ಬೆಂಗಳೂರು: ಹಸಿದವರ ಹೊಟ್ಟೆಗೆ ಅನ್ನದ ಭಾಗ್ಯವಾದೆ ಎಂದು ಸಿದ್ದರಾಮಯ್ಯನವರು ಪತ್ರಿಕೆಗಳಲ್ಲಿ ಜಾಹೀರಾತು ಹಾಕಿಸಿಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ದುಡ್ಡು ಕೊಟ್ಟಿದ್ದನ್ನು ಮುಚ್ಚಿಟ್ಟು ತನ್ನ ಜೇಬಿನಿಂದ ದುಡ್ಡು‌ ಕೊಟ್ಟಂತೆ ಸಿದ್ದರಾಮಯ್ಯ ಪ್ರಚಾರ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಟೀಕಿಸಿರುವ ಬಿಜೆಪಿ, ಇದು ಸಿದ್ದರಾಮೋತ್ಸವವಲ್ಲ ಕಾಂಗ್ರೆಸ್‍ನ ಅಂತ್ಯೋತ್ಸವ ಎಂದು ಕುಟುಕಿದೆ. ‘ನೇಗಿಲ ಯೋಗಿಗೆ ಜಲಭಾಗ್ಯದ ಭಗೀರಥನಂತೆ! ವಿಪಕ್ಷ ನಾಯಕ ಸಿದ್ದರಾಮಯ್ಯನವರೇ ಸುಳ್ಳು ಹೇಳುವುದಕ್ಕೂ ಒಂದು … Read more

ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧ: ಆರ್ ಅಶೋಕ್

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧವಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆಯ ಸಲುವಾಗಿ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು, ನಗರದ ಶಾಸಕರು, ಸಂಸದರು, ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು. ನಮ್ಮೆಲ್ಲಾ ಶಾಸಕರು, ಪದಾಧಿಕಾರಿಗಳು ಎರಡು ಗಂಟೆಗೂ ಹೆಚ್ಚು ಕಾಲ ಚರ್ಚೆ ಮಾಡಿದ್ದೇವೆ.ಈಗಾಗಲೇ ಕೋರ್ಟ್ ಕೂಡ ಸೂಚನೆ ನೀಡಿದೆ. ಚುನಾವಣೆ ತಯಾರಿ ಪ್ರಾರಂಭವಾಗಿದೆ. ಓಟರ್ ಲಿಸ್ಟ್ ಗೆ ಸೇರಿಸೋದು, ಬೂತ್ ಮಟ್ಟದಿಂದ ಜಿಲ್ಲಾಮಟ್ಟದ ವರೆಗೆ ಕಾರ್ಯಕರ್ತರ ಸಭೆ … Read more

BJP PM Candidate: 2024ರ ಚುನಾವಣೆಗೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಘೋಷಿಸಿದ ಅಮಿತ್ ಶಾ

ನವದೆಹಲಿ: 2024ರಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸಲಿದ್ದು, ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ 2 ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿ ಯಾರಾಗ್ತಾರೆ ಅನ್ನೋದರ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ರಾಜಕೀಯದಿಂದ ನಿವೃತ್ತಿ ಹೊಂದಲಿದ್ದು, ಹೊಸ ಮುಖಗಳನ್ನು ಬಿಜೆಪಿ ಕಣಕ್ಕಿಳಿಸಲಿದೆ … Read more

ಒಂದೆಡೆ ‘ಜನತಾ ಜಲಧಾರೆ’ ಮತ್ತೊಂದೆಡೆ ಕಣ್ಣೀರಧಾರೆ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇಗೇಗೌಡರ ಸ್ಥಿತಿ ಕಂಡು ಎಚ್‍.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಕಣ್ಣೀರು ಹಾಕಿದ್ದರು. ಜೆಡಿಎಸ್ ನಾಯಕರು ಹರಿಸಿರುವ ಕಣ್ಣೀರಧಾರೆಗೆ ಬಿಜೆಪಿ ವ್ಯಂಗ್ಯವಾಡಿದೆ. #ಜೆಡಿಎಸ್‌ಕಣ್ಣೀರೋತ್ಸವ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ!’ ಎಂದು ಟೀಕಿಸಿದೆ. ಇದನ್ನೂ ಓದಿ: ʼಕರಾವಳಿಯಲ್ಲಿ ದೊಡ್ಡಮಟ್ಟದ ಕೋಮು … Read more

ಶ್ರೀಲಂಕಾದಂತೆ ಭಾರತದಲ್ಲಿಯೂ ಜನರು ಪ್ರಧಾನಿ ನಿವಾಸಕ್ಕೆ ನುಗ್ಗುತ್ತಾರೆ: ಒವೈಸಿ

ನವದೆಹಲಿ: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮತ್ತೊಮ್ಮೆ ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಶ್ರೀಲಂಕಾದಂತೆ ಭಾರತದಲ್ಲಿಯೂ ಪ್ರಧಾನಿ ನಿವಾಸಕ್ಕೆ ಜನರು ನುಗ್ಗುತ್ತಾರೆ’ ಎಂದು ಎಚ್ಚರಿಕೆ ನೀಡಿದ್ದಾರೆ. ‘ವೋಟ್ ಬ್ಯಾಂಕ್ ರಾಜಕಾರಣದಿಂದ ಅಭಿವೃದ್ಧಿಯಾಗಿದೆ, ಆದರೆ ಮುಸ್ಲಿಮರು ಅಭಿವೃದ್ಧಿಯಾಗಲಿಲ್ಲ. ಏಕೆಂದರೆ ಮುಸ್ಲಿಮರನ್ನು ಮತಬ್ಯಾಂಕ್ ಎಂದು ಪರಿಗಣಿಸಲೇ ಇಲ್ಲ. ಇಂದು ಶಿಕ್ಷಣವೂ ಇಲ್ಲ, ಉದ್ಯೋಗವೂ ಇಲ್ಲ. ಸಂವಿಧಾನದಲ್ಲಿ ಏನನ್ನು ಬರೆಯಲಾಗಿದೆಯೋ ಅದನ್ನು ವ್ಯತಿರಿಕ್ತಗೊಳಿಸಲಾಗುತ್ತಿದೆ. ನಮ್ಮ ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವವಿದೆ. ಆದರೆ ವಾಸ್ತವ ಸ್ವರೂಪವನ್ನು ನೀಡಲು ನಮಗೆ ಸಾಧ್ಯವಾಗುತ್ತಿಲ್ಲ’ವೆಂದು ಓವೈಸಿ … Read more