ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಬೆಂಕಿ ಉಗುಳಿದ ಎಚ್‍ಡಿಕೆ!

ಬೆಂಗಳೂರು: ನರಗಳ ದೌರ್ಬಲ್ಯವಿದ್ದರೆ ಮಕ್ಕಳಾಗುವುದು ವಿಳಂಬವಾಗುತ್ತದೆ ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಮೇಶ್ ಕುಮಾರ್ ವಿಕೃತ, ಕೊಳಕು ಮನಃಸ್ಥಿತಿ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವಿಕೃತ-ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. … Read more

ತಂದೆ ಸಿಎಂ ಆಗ್ಬೇಕು, ನಾನು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲ್ಲ: ನಿಖಿಲ್ ಕುಮಾರಸ್ವಾಮಿ!

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಸಿಎಂ ಗದ್ದುಗೆಯ ಸದ್ದು ಜೋರಾಗಿದೆ. ತಂದೆ ಎಚ್.ಡಿ.ಕುಮಾರಸ್ವಾಮಿಗಾಗಿ ನಿಖಿಲ್ ಕುಮಾರಸ್ವಾಮಿ ತಮ್ಮ ರಾಜಕೀಯ ಭವಿಷ್ಯವನ್ನೇ ತ್ಯಾಗ ಮಾಡ್ತಾರಾ ಅನ್ನೋ ಪ್ರಶ್ನೆ ಮೂಡಿದೆ. ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಚ್‍ಡಿಕೆಯವರನ್ನು ಸಿಎಂ ಮಾಡಲು ನಿಖಿಲ್ ಪ್ರಚಾರ ನಡೆಸುತ್ತಾರಂತೆ. ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದನ್ನು ಕೈಬಿಟ್ಟು ತಂದೆ ಪರ ನಿಖಿಲ್ ಪ್ರಚಾರಕ್ಕಿಳಿಯಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಅಣ್ಣಾ(ಎಚ್‍ಡಿಕೆ) ಈ ಬಾರಿ ಮುಖ್ಯಮಂತ್ರಿಯಾಗಬೇಕು.. ಅದೇ ನಮ್ಮ ಗುರಿ’ ಎಂದು … Read more

ಕಾಂಗ್ರೆಸ್ ದೌರ್ಬಲ್ಯದ ಮೇಲೆ ನಾವು ರಾಜಕೀಯ ಮಾಡುವುದಿಲ್ಲ -ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಪಕ್ಷದಲ್ಲಿ  ಭಿನ್ನಮತ ಇನ್ನೂ ಹೆಚ್ಚಾಗುತ್ತದೆ ಎಂಬ ಬಗ್ಗೆ ನಾನು ಮಾತನಾಡುವುದಿಲ್ಲ. ಅವರ ದೌರ್ಬಲ್ಯದ ಮೇಲೆ ನಾವು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ. ಮುಂಬರುವ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷ ಕಚೇರಿ ಜೆಪಿ ಭವನದಲ್ಲಿ ಕರೆದಿರುವ  ಪಕ್ಷದ ಮುಖಂಡರು, ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದರು ಅವರು.ಸಿದ್ದರಾಮೋತ್ಸವಕ್ಕೆ ಬರುವಾಗ ಅವರ ಕ್ಷೇತ್ರದ ಕಾರ್ಯಕರ್ತರೊಬ್ಬರು  ಮೃತಪಟ್ಟಿದ್ದಾರೆ. ಆ ಕಾರ್ಯಕ್ರಮದಲ್ಲಿ ಆ ಕಾರ್ಯಕರ್ತನಿಗಾಗಿ ಒಂದು ಶ್ರದ್ಧಾಂಜಲಿ ಕೂಡ ಸಲ್ಲಿಕೆ‌‌ ಮಾಡಿಲ್ಲ. … Read more

‘ಕರಾವಳಿ ತ್ರಿವಳಿ ಕೊಲೆ ನೈಜ ಹಂತಕರನ್ನು ಬಂಧಿಸದಿದ್ದರೆ ಮಂಗಳೂರು ಡಿಸಿ ಕಚೇರಿ ಎದುರು ಸತ್ಯಾಗ್ರಹ’

ಮಂಗಳೂರು: ಪ್ರವೀಣ್ ನೆಟ್ಟಾರು, ಮಸೂದ್ ಹಾಗೂ ಫಾಝಿಲ್ ಕೊಲೆ ಪ್ರಕರಣದಲ್ಲಿ ಸರಿಯಾದ ರೀತಿ ತನಿಖೆ ಆಗದಿದ್ದರೆ, ಮೂರು ಪ್ರಕರಣಗಳಲ್ಲಿ ನೈಜ ಆರೋಪಿಗಳನ್ನು ಆಗಸ್ಟ್ 5 ರೊಳಗೆ ಬಂಧಿಸದಿದ್ದರೆ ಮರುದಿನದಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ  ಸತ್ಯಾಗ್ರಹ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಇತ್ತೀಚೆಗೆ ಹತ್ಯೆಯಾದ ಈ ಮೂವರು ಯುವಕರ ಮನೆಗಳಿಗೆ ಇಂದು ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ನಂತರ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್ ಡಿಕೆ, … Read more

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ತನಿಖೆ ಮಾಡಲು ಪೊಲೀಸರಿಗೆ ಮುಕ್ತ ಅಧಿಕಾರ: ಸಿಎಂ ಬೊಮ್ಮಾಯಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎನ್‌ಐಎಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಹಸ್ತಾಂತರ ಮಾಡಲಾಗುವುದು. ಅನೌಪಚಾರಿಕವಾಗಿ ಎನ್‌ಐಎಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು … Read more

ಮಂಗಳೂರಿಗೆ ಹೆಚ್‌ಡಿಕೆ ಭೇಟಿ: ಮೃತರ ಕುಟುಂಬಗಳಿಗೆ ಸ್ವಾಂತ್ವನ ಹೇಳಿ ಧನಸಹಾಯ ನೀಡಿದ ಮಾಜಿ ಸಿಎಂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೆ ಗುರಿಯಾಗಿದ್ದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿದರು.ಅಲ್ಲದೆ, ನೊಂದ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಹಸ್ತಾಂತರ ಮಾಡಿದರು. ಇದನ್ನೂ ಓದಿ: Monkeypox: ಕರ್ನಾಟಕದ ಗಡಿ ರಾಜ್ಯದಲ್ಲಿ ಮಂಕಿಪಾಕ್ಸ್‌ಗೆ ಓರ್ವ ಬಲಿ? ಬೆಳಗ್ಗೆಯೇ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ … Read more

ಒಂದೆಡೆ ‘ಜನತಾ ಜಲಧಾರೆ’ ಮತ್ತೊಂದೆಡೆ ಕಣ್ಣೀರಧಾರೆ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇಗೇಗೌಡರ ಸ್ಥಿತಿ ಕಂಡು ಎಚ್‍.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಕಣ್ಣೀರು ಹಾಕಿದ್ದರು. ಜೆಡಿಎಸ್ ನಾಯಕರು ಹರಿಸಿರುವ ಕಣ್ಣೀರಧಾರೆಗೆ ಬಿಜೆಪಿ ವ್ಯಂಗ್ಯವಾಡಿದೆ. #ಜೆಡಿಎಸ್‌ಕಣ್ಣೀರೋತ್ಸವ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ!’ ಎಂದು ಟೀಕಿಸಿದೆ. ಇದನ್ನೂ ಓದಿ: ʼಕರಾವಳಿಯಲ್ಲಿ ದೊಡ್ಡಮಟ್ಟದ ಕೋಮು … Read more