ಕಾಂಗ್ರೆಸ್ ದೌರ್ಬಲ್ಯದ ಮೇಲೆ ನಾವು ರಾಜಕೀಯ ಮಾಡುವುದಿಲ್ಲ -ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಪಕ್ಷದಲ್ಲಿ  ಭಿನ್ನಮತ ಇನ್ನೂ ಹೆಚ್ಚಾಗುತ್ತದೆ ಎಂಬ ಬಗ್ಗೆ ನಾನು ಮಾತನಾಡುವುದಿಲ್ಲ. ಅವರ ದೌರ್ಬಲ್ಯದ ಮೇಲೆ ನಾವು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ. ಮುಂಬರುವ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷ ಕಚೇರಿ ಜೆಪಿ ಭವನದಲ್ಲಿ ಕರೆದಿರುವ  ಪಕ್ಷದ ಮುಖಂಡರು, ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದರು ಅವರು.ಸಿದ್ದರಾಮೋತ್ಸವಕ್ಕೆ ಬರುವಾಗ ಅವರ ಕ್ಷೇತ್ರದ ಕಾರ್ಯಕರ್ತರೊಬ್ಬರು  ಮೃತಪಟ್ಟಿದ್ದಾರೆ. ಆ ಕಾರ್ಯಕ್ರಮದಲ್ಲಿ ಆ ಕಾರ್ಯಕರ್ತನಿಗಾಗಿ ಒಂದು ಶ್ರದ್ಧಾಂಜಲಿ ಕೂಡ ಸಲ್ಲಿಕೆ‌‌ ಮಾಡಿಲ್ಲ. … Read more

ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಮಹತ್ವದ ಸಭೆ

ಹುಬ್ಬಳ್ಳಿ: ಸಿದ್ಧರಾಮೋತ್ಸವ ಕಾರ್ಯಕ್ರದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ರಾತ್ರಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಸಭೆಯನ್ನು ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ‘ರಾಜಕೀಯ ವ್ಯವಹಾರಗಳ ಸಮಿತಿ’ ಸಭೆಯಲ್ಲಿ ಕಾಂಗ್ರೆಸ್‌‌ ರಾಷ್ಟ್ರೀಯ ನಾಯಕರಾದ @RahulGandhi, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @kcvenugopalmp ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಧಾನಸಭೆ ವಿಪಕ್ಷ ನಾಯಕರಾದ @siddaramaiah, ವಿಧಾನ ಪರಿಷತ್ ವಿಪಕ್ಷ ನಾಯಕರಾದ @HariprasadBK2 ಉಪಸ್ಥಿತರಿದ್ದರು. pic.twitter.com/OGpYcSQd2k — Karnataka Congress (@INCKarnataka) August … Read more

ಮಂಕಿಪಾಕ್ಸ್ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ಮಂಕಿಪಾಕ್ಸ್ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿದ ಸೂಚನೆಗಳು 1. ದೇಶದಲ್ಲಿ ಆರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಸೋಂಕಿತರ ಪರೀಕ್ಷೆಗೆ ಸೂಕ್ತ ಕ್ರಮ ವಹಿಸಬೇಕು.  2. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ಸೋಂಕು ಧೃಢಪಟ್ಟ ವ್ಯಕ್ತಿಗಳನ್ನು 21 ದಿನಗಳ ಕ್ವಾರಂಟೈನ್ ಮಾಡುವುದು ಸೇರಿದಂತೆ ಅಗತ್ಯ … Read more

ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧ: ಆರ್ ಅಶೋಕ್

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧವಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆಯ ಸಲುವಾಗಿ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು, ನಗರದ ಶಾಸಕರು, ಸಂಸದರು, ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು. ನಮ್ಮೆಲ್ಲಾ ಶಾಸಕರು, ಪದಾಧಿಕಾರಿಗಳು ಎರಡು ಗಂಟೆಗೂ ಹೆಚ್ಚು ಕಾಲ ಚರ್ಚೆ ಮಾಡಿದ್ದೇವೆ.ಈಗಾಗಲೇ ಕೋರ್ಟ್ ಕೂಡ ಸೂಚನೆ ನೀಡಿದೆ. ಚುನಾವಣೆ ತಯಾರಿ ಪ್ರಾರಂಭವಾಗಿದೆ. ಓಟರ್ ಲಿಸ್ಟ್ ಗೆ ಸೇರಿಸೋದು, ಬೂತ್ ಮಟ್ಟದಿಂದ ಜಿಲ್ಲಾಮಟ್ಟದ ವರೆಗೆ ಕಾರ್ಯಕರ್ತರ ಸಭೆ … Read more