ಮೋದಿ ವಿರುದ್ಧ ಪ್ರತಿಭಟನೆಗೆ ಹೊಸ ತಂತ್ರ: ನೀತಿ ಆಯೋಗದ ಸಭೆ ಹೊರಬಂದ್ರಾ ನಿತೀಶ್-ಕೆಸಿಆರ್!

NITI Aayog Meeting: ಇಂದು ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಸಭೆ ನಡೆಯಲಿದೆ. ಈ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ನೀತಿ ಆಯೋಗದ ಸಭೆಗೂ ಮುನ್ನವೇ ಈ ಬಗ್ಗೆ ರಾಜಕೀಯ ತೀವ್ರಗೊಂಡಿದೆ. ವಾಸ್ತವವಾಗಿ, ಕೆಲವು ಮುಖ್ಯಮಂತ್ರಿಗಳು ವಿವಿಧ ಕಾರಣಗಳನ್ನು ನೀಡಿ ಸಭೆಗೆ ಹಾಜರಾಗದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದರಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ … Read more

Mann Ki Baat: ಕರ್ನಾಟಕದ ಜೇನುಕೃಷಿ ಮತ್ತು ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 91ನೇ ಆವೃತ್ತಿಯ ‘ಮನ್ ಕೀ ಬಾತ್‍’ ಕಾರ್ಯಕ್ರಮದಲ್ಲಿ ಕರ್ನಾಟಕದ ಜೇನುಕೃಷಿಕ ಮತ್ತು ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತ ತನ್ನ 75 ವರ್ಷಗಳ ಸ್ವಾತಂತ್ರ್ಯವನ್ನು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಎಂದು ಆಚರಿಸುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ‘ಪ್ರಧಾನಿ ಮೋದಿಯವರು ಇಂದು … Read more

BJP PM Candidate: 2024ರ ಚುನಾವಣೆಗೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಘೋಷಿಸಿದ ಅಮಿತ್ ಶಾ

ನವದೆಹಲಿ: 2024ರಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸಲಿದ್ದು, ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ 2 ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿ ಯಾರಾಗ್ತಾರೆ ಅನ್ನೋದರ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ರಾಜಕೀಯದಿಂದ ನಿವೃತ್ತಿ ಹೊಂದಲಿದ್ದು, ಹೊಸ ಮುಖಗಳನ್ನು ಬಿಜೆಪಿ ಕಣಕ್ಕಿಳಿಸಲಿದೆ … Read more

ಶ್ರೀಲಂಕಾದಂತೆ ಭಾರತದಲ್ಲಿಯೂ ಜನರು ಪ್ರಧಾನಿ ನಿವಾಸಕ್ಕೆ ನುಗ್ಗುತ್ತಾರೆ: ಒವೈಸಿ

ನವದೆಹಲಿ: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮತ್ತೊಮ್ಮೆ ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಶ್ರೀಲಂಕಾದಂತೆ ಭಾರತದಲ್ಲಿಯೂ ಪ್ರಧಾನಿ ನಿವಾಸಕ್ಕೆ ಜನರು ನುಗ್ಗುತ್ತಾರೆ’ ಎಂದು ಎಚ್ಚರಿಕೆ ನೀಡಿದ್ದಾರೆ. ‘ವೋಟ್ ಬ್ಯಾಂಕ್ ರಾಜಕಾರಣದಿಂದ ಅಭಿವೃದ್ಧಿಯಾಗಿದೆ, ಆದರೆ ಮುಸ್ಲಿಮರು ಅಭಿವೃದ್ಧಿಯಾಗಲಿಲ್ಲ. ಏಕೆಂದರೆ ಮುಸ್ಲಿಮರನ್ನು ಮತಬ್ಯಾಂಕ್ ಎಂದು ಪರಿಗಣಿಸಲೇ ಇಲ್ಲ. ಇಂದು ಶಿಕ್ಷಣವೂ ಇಲ್ಲ, ಉದ್ಯೋಗವೂ ಇಲ್ಲ. ಸಂವಿಧಾನದಲ್ಲಿ ಏನನ್ನು ಬರೆಯಲಾಗಿದೆಯೋ ಅದನ್ನು ವ್ಯತಿರಿಕ್ತಗೊಳಿಸಲಾಗುತ್ತಿದೆ. ನಮ್ಮ ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವವಿದೆ. ಆದರೆ ವಾಸ್ತವ ಸ್ವರೂಪವನ್ನು ನೀಡಲು ನಮಗೆ ಸಾಧ್ಯವಾಗುತ್ತಿಲ್ಲ’ವೆಂದು ಓವೈಸಿ … Read more